Ad Widget .

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

Samagra news: ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದ ಪ್ರಕರಣದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ. ಈ ವೇಳೆ ಅಲ್ಲಿ ನೆರೆದಿದ್ದ ಭಕ್ತರು ಬಾವಿಯೊಳಗೆ ಬಿದ್ದಿದ್ದಾರೆ.

Ad Widget . Ad Widget . Ad Widget .

ಘಟನೆ ನಡೆದ ತಕ್ಷಣಕ್ಕೆ ಪ್ರತ್ಯಕ್ಷದರ್ಶಿಗಳು ಸುಮಾರು 25 ಜನರು ಬಾವಿಯೊಳಗೆ ಬಿದ್ದಿದ್ದಾಗಿ ತಿಳಿಸಿದ್ದರು. ಆದರೆ ಅಂದಾಜಿಸಿದ್ದಕ್ಕಿಂತಲೂ ಹೆಚ್ಚು ಜನರು ಬಾವಿಯೊಳಗೆ ಬಿದ್ದಿದ್ದರು ಎಂಬುದು ತಿಳಿದುಬಂದಿದೆ. ಈಗಾಗಲೇ ಮೃತರ ಸಂಖ್ಯೆ 35ಕ್ಕೆ ಏರಿದೆ. ಬಾವಿಗೆ ಬಿದ್ದಿದ್ದ 14 ಜನರ ರಕ್ಷಣೆ ಮಾಡಲಾಗಿದೆ. ಒಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರಿಸಲಾಗಿದೆ.

Leave a Comment

Your email address will not be published. Required fields are marked *