Ad Widget .

ಹಾಸನ: ರಾಮನವಮಿ ಮೆರವಣಿಗೆ ವಿಚಾರ| ಎರಡು ಕೋಮಿನ ಯುವಕರ ನಡುವೆ ಗಲಾಟೆ |ಇಬ್ಬರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಮೆರವಣಿಗೆ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ.

Ad Widget . Ad Widget .

ಗುರುವಾರ ರಾತ್ರಿ ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *