Ad Widget .

ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿದ ಬಿಜೆಪಿ ಶಾಸಕ|ಎಡವಟ್ಟಿನ ವೀಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್

ಸಮಗ್ರ ನ್ಯೂಸ್: ಬಿಜೆಪಿ ಶಾಸಕ (BJP MLA) ರೊಬ್ಬರು ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

Ad Widget . Ad Widget .

ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕ ಮಾಡಿಕೊಂಡಿರುವ ಎಡವಟ್ಟಿನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಮೂಲಕ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮ(Shri Rama) ನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ.

Ad Widget . Ad Widget .

ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್ (Sharanu Salagar) ಅವರು ಶ್ರೀರಾಮನ ಎಡಗಡೆಯ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿ ಪೋಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಶಾಸಕರ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ಒಟ್ಟಿನಲ್ಲಿ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡ ಶಾಸಕರ ವಿರುದ್ಧ ಶ್ರೀರಾಮನ ಭಕ್ತ ಅಸಮಾಧಾನ ಹೊರಹಾಕಿದ್ದು, ಬಸವಕಲ್ಯಾಣವನ್ನು ಬಿಡದ ಶಾಸಕರು ಶ್ರೀರಾಮನನ್ನು ಬಿಟ್ಟಿಲ್ಲಾ ಎಂದು ಆಕ್ರೋಶ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *