March 2023

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ| ಓರ್ವನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೆಲಸ‌ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಘಟನೆ ಸುಳ್ಯ ನಗರದ ಗಾಂಧಿನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಶನಿವಾರ ನಗರದ ಗಾಂಧಿನಗರ ಆಲೆಟ್ಟಿ ರಸ್ತೆ ಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ದೊಡ್ಡ ಗುಡ್ಡವಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ […]

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ| ಓರ್ವನ ಮೃತದೇಹ ಪತ್ತೆ Read More »

ಸುಳ್ಯದ ಮಹಿಳಾ ಸಮಾಜ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸಾಹಿತಿ ಭೀಮರಾವ್ ವಾಷ್ಠರ್ ರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸುಳ್ಯದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜರುಗಿದ ಮಹಿಳಾ ಕವಿಗೋಷ್ಠಿ ಮತ್ತು ಸನ್ಮಾನ ಸಮಾರಂಭದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ನಟ , ನಿರ್ದೇಶಕ , ಸಾಹಿತಿ, ಜ್ಯೋತಿಷಿ, ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ರವರನ್ನು ಸುಳ್ಯದ ಮಹಿಳಾ ಸಮಾಜ ಹಾಗೂ ಸುಳ್ಯ ತಾಲೂಕು ಗೌಡ ಮಹಿಳಾ ಘಟಕ ಜಂಟಿಯಾಗಿ ಸನ್ಮಾನಿಸಿ ಗೌರವಿಸಿದರು . ಸನ್ಮಾನ ಸಮಾರಂಭದಲ್ಲಿ ಮಹಿಳಾ ಸಮಾಜ ಸುಳ್ಯ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ

ಸುಳ್ಯದ ಮಹಿಳಾ ಸಮಾಜ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸಾಹಿತಿ ಭೀಮರಾವ್ ವಾಷ್ಠರ್ ರಿಗೆ ಗೌರವ ಸನ್ಮಾನ Read More »

Weather report| ರಾಜ್ಯದ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ| ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಶನಿವಾರ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3

Weather report| ರಾಜ್ಯದ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ| ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆ ಮುನ್ಸೂಚನೆ Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ

ಸಮಗ್ರ ನ್ಯೂಸ್: ಕಳೆದ ವರ್ಷ ಅಪಘಾತದಿಂದ ಸಾವನ್ನಪ್ಪಿದ್ದ ಪೆರಾಜೆಯ ಬಾಲಗಾಯಕ ಮತ್ತು ಪ್ರತಿಭಾನ್ವಿತ ದಿ| ವಿಶ್ವದೀಪ್ ಕುಂದಲ್ಪಾಡಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವಾಟ್ಸಾಪ್ ಆನ್ ಲೈನ್ ಲ್ಲಿ ಶೋಕಗಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಡ್ಮಿನ್ ಹಾಗೂ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿರೂಪಿಸಿದರು . ವಿಶ್ವದೀಪ್ ರವರ ತಂದೆಯಾದ ಲೋಕನಾಥ ಗೌಡ ಕುಂದಲ್ಪಾಡಿ ಮತ್ತು

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ Read More »

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, ಉಳ್ಳಾಲದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಸ್ಪರ್ಧೆ ಖಚಿತವಾಗಿದೆ. ಇನ್ನು ಸುಳ್ಯದಿಂದ ಕೃಷ್ಣಪ್ಪ, ಮೂಡುಬಿದಿರೆಯಿಂದ ಮಿಥುನ್ ರೈ ಬೆಳ್ತಂಗಡಿ ಯಿಂದ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡಲಾಗಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ದ.ಕ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ? Read More »

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

ಸುಳ್ಯ: ಅಪಘಾತದಲ್ಲಿ ಬಾಲಕಿ ಸಾವು ಪ್ರಕರಣ| ಬಸ್ ಚಾಲಕನಿಗೆ ಜೈಲು

ಸಮಗ್ರ ನ್ಯೂಸ್: ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಫೆ.12, 2018ರಂದು ಕೆವಿಜಿಯ ಐಪಿಎಸ್ ಶಾಲೆಯ ಒಂದನೆಯ ತರಗತಿ ವಿದ್ಯಾರ್ಥಿನಿ ಆಗ್ನೇಯ ಬಾಲು ಬಸ್ಸಿನ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲಾ ಬಸ್ ಚಾಲಕ ಧನಂಜಯ ಎಂಬುವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಂದಿನ ತನಿಖಾಧಿಕಾರಿ ಸರ್ಕಲ್ ಇನ್ ಸ್ಪೆಕ್ಟರ್ ಸತೀಶ್ ಕುಮಾರ್ ಆರ್ ಪ್ರಕರಣ ದಾಖಲಿಸಿಕೊಂಡು ಬಸ್ಸು ಚಾಲಕ ಧನಂಜಯರ ಮೇಲೆ ಕಲಂ 279, 304(ಎ ) ಮತ್ತು

ಸುಳ್ಯ: ಅಪಘಾತದಲ್ಲಿ ಬಾಲಕಿ ಸಾವು ಪ್ರಕರಣ| ಬಸ್ ಚಾಲಕನಿಗೆ ಜೈಲು Read More »

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿಗಳಿಗೆ ಮಾ.27ರಿಂದ ನಡೆಯಲಿರುವ ಬೋರ್ಡ್‌ ಮಟ್ಟದ (ಮಂಡಳಿ) ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು ಹೈಕೋರ್ಟ್‌ ಮತ್ತೊಮ್ಮೆ ತಿರಸ್ಕರಿಸಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ಪೀಠದ ಮುಂದೆ ಶುಕ್ರವಾರ

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ Read More »

ಇಂದು(ಮಾ. 25) ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಮಹಾಸಂಗಮ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ 4 ಕಡೆಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸುಮಾರು 10 ಲಕ್ಷ ಮಂದಿ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮಿಷನ್ 150 ಗುರಿಯೊಂದಿಗೆ ಮಾರ್ಚ್ 1 ರಂದು ಮಲೆ ಮಹಾದೇಶ್ವರ ಬೆಟ್ಟ, ಮಾರ್ಚ್ 2ರಂದು ನಂದಗಡ, ಮಾರ್ಚ್ 3ರಂದು ಬಸವಕಲ್ಯಾಣ ಮತ್ತು ಅವತಿದೇವನಹಳ್ಳಿಯಿಂದ

ಇಂದು(ಮಾ. 25) ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಮಹಾಸಂಗಮ Read More »

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ

ಸಮಗ್ರ ನ್ಯೂಸ್: ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ.

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ Read More »