March 2023

ಕೊಟ್ಟಿಗೆಹಾರ,ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ

ಸಮಗ್ರ ನ್ಯೂಸ್: ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರಾತ್ರಿ 7 ಗಂಟೆಗೆ ಪ್ರಾರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಬಣಕಲ್, ಕೊಟ್ಟಿಗೆಹಾರ, ತರುವೆ, ಬಿನ್ನಡಿ, ಅತ್ತಿಗೆರೆ, ಬಗ್ಗಸಗೋಡು, ಫಲ್ಗುಣಿ, ಹೊರಟ್ಟಿ, ಬಿದರಹಳ್ಳಿ ಮುಂತಾದ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಕಾಫಿ ಬೆಳೆಗಾರರು ಮುಂದಿನ ವರ್ಷದ ಪಸಲಿಗಾಗಿ ತೋಟಕ್ಕೆ ನೀರು ಹಾಯಿಸುವ ಸಿದ್ದತೆಯಲ್ಲಿದ್ದರು. ಬಹುತೇಕ ಬೆಳೆಗಾರರು ಕಾಫಿ ತೋಟಕ್ಕೆ ನೀರು ಹಾಯಿಸಿದ್ದರು. […]

ಕೊಟ್ಟಿಗೆಹಾರ,ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ Read More »

ಕೊಟ್ಟಿಗೆಹಾರ: ಹೆದ್ದಾರಿ ಪ್ರಾಧಿಕಾರದಿಂದ ಗುಂಡಿ ಭಾಗ್ಯ

ಸಮಗ್ರ ನ್ಯೂಸ್: ಮೂಡಿಗೆರೆ ಹ್ಯಾಂಡ್‍ಪೋಸ್ಟ್‍ನಿಂದ ಕೊಟ್ಟಿಗೆಹಾರದವರೆಗೆ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯು ವರ್ಷದೊಳಗೆ ಗುಂಡಿ ಬಿದ್ದಿದ್ದು ಅಪಘಾತವನ್ನು ಆಹ್ವಾನಿಸುವಂತಿದೆ. ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾದು ಹೋಗಿರುವ ಮೂಡಿಗೆರೆ ಹ್ಯಾಂಡ್‍ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೆ ಸುಮಾರು 13 ಕಿ.ಮಿ ನೂತನ ರಸ್ತೆ ನಿರ್ಮಾಣವಾಗಿದ್ದು ಚಕ್ಕಮಕ್ಕಿ, ಹೆಬ್ಬರಿಗೆ, ಬಗ್ಗಸಗೋಡು, ಸಬ್ಬೇನಹಳ್ಳಿ, ಹೊರಟ್ಟಿ, ಬಿದರಹಳ್ಳಿಯಲ್ಲಿ ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದೆ. ಹೆದ್ದಾರಿಯ ಗುಂಡಿಗಳನ್ನು ತಪ್ಪಿಸಲು ಹೋಗಿ ವಾಹನಗಳು ಅಪಘಾತಕ್ಕೀಡಾಗುವ ಸಂಭವವಿದ್ದು ಹೆದ್ದಾರಿ ಪ್ರಾಧಿಕಾರ ರಸ್ತೆಯ ಗುಂಡಿಗಳನ್ನು ಮುಚ್ಚಲು ಮುಂದಾಗುವ ಅಗತ್ಯವಿದೆ. ಹೆದ್ದಾರಿ

ಕೊಟ್ಟಿಗೆಹಾರ: ಹೆದ್ದಾರಿ ಪ್ರಾಧಿಕಾರದಿಂದ ಗುಂಡಿ ಭಾಗ್ಯ Read More »

KPTCL ಮತ್ತು ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿ ಸುದ್ದಿ| ಶೇ.20ರಷ್ಟು ವೇತನ ಹೆಚ್ಚಿಸಿ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಮಾಡಿದೆ. ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ

KPTCL ಮತ್ತು ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿ ಸುದ್ದಿ| ಶೇ.20ರಷ್ಟು ವೇತನ ಹೆಚ್ಚಿಸಿ ಆದೇಶ Read More »

union govt announced high alert|ಎಲ್ಲಾ ರಾಜ್ಯಗಳಿಗೆ ಹೈಅಲರ್ಟ್ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಪ್ರತಿ ವರ್ಷ ಫೆಬ್ರವರಿಯಲ್ಲಿ ಚಳಿ ಅನುಭವಿಸುತ್ತಿದ್ದ ಜನ ಈ ಬಾರಿ ಕಳೆದೊಂದು ತಿಂಗಳಿನಿಂದ ಬಿಸಿಲಿನ ಜಳವನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ತೀವ್ರ ಬಿಸಿಗಾಳಿ ಮತ್ತು ಬಿಸಿಗಾಳಿಯ ಬಗ್ಗೆ ಕೇಂದ್ರವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಈ ಬಾರಿ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆಯೂ ಎಚ್ಚರಿಸಿದೆ. ಮಂಗಳವಾರ, ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ದೇಶದಲ್ಲಿ ಬೇಸಿಗೆ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದರು. ಇದರಲ್ಲಿ

union govt announced high alert|ಎಲ್ಲಾ ರಾಜ್ಯಗಳಿಗೆ ಹೈಅಲರ್ಟ್ ನೀಡಿದ ಕೇಂದ್ರ ಸರ್ಕಾರ Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸಲು ಉದ್ದೇಶಿಸಿದ್ದ ಐದು ಮತ್ತು ಎಂಟನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ದ್ವಿ ಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮಾರ್ಚ್ 13ರಿಂದ ಆರಂಭವಾಗಬೇಕಿದ್ದ 5, 8 ತರಗತಿಗಳ ಪಬ್ಲಿಕ್ ಪರೀಕ್ಷೆಗಳನ್ನು ಕರ್ನಾಟಕ ಹೈಕೋರ್ಟ್ ನ ಆದೇಶದಂತೆ ಮುಂದೂಡಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮತ್ತೆ ಪರೀಕ್ಷೆ ನಡೆಸಲು

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್ Read More »

ದಶಪಥ ಹೆದ್ದಾರಿಯಲ್ಲಿ ಅಪಘಾತ| ಟೈರ್ ಬ್ಲಾಸ್ಟ್ ಆಗಿ ಕಾರು ಚಾಲಕ ಸ್ಪಾಟೌಟ್

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರು ಟೈಯರ್ ಬ್ಲಾಸ್ಟ್​ ಆಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯದ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ. ಪರಿಣಾಮ ಮಂಜುನಾಥ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಕಾರು ಟೈರ್​​ ಬ್ಲಾಸ್ಟ್​ ಆಗಿದೆ. ವೇಗದಲ್ಲಿ ಚಲಿಸುತ್ತಿದ್ದ ಕಾರಣ ಕಾರು ಪಟ್ಟಿ ಹೊಡೆದು ಗ್ರೀಲ್ಸ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ

ದಶಪಥ ಹೆದ್ದಾರಿಯಲ್ಲಿ ಅಪಘಾತ| ಟೈರ್ ಬ್ಲಾಸ್ಟ್ ಆಗಿ ಕಾರು ಚಾಲಕ ಸ್ಪಾಟೌಟ್ Read More »

ಶೀಘ್ರವೇ ಸಾರಿಗೆ ನೌಕರರ ವೇತನ ಹೆಚ್ಚಿಸಲಾಗುತ್ತೆ – ಸಚಿವ ಬಿ. ಶ್ರೀರಾಮುಲು

ಸಮಗ್ರ ನ್ಯೂಸ್: ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ. ಸಾರಿಗೆ ನೌಕರರ ಜೊತೆಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದೇನೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಮಾತುಕತೆ ನಡೆಯುತ್ತಿದೆ. ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ ಅನ್ನೋ ವಿಶ್ವಾಸವಿದೆ.

ಶೀಘ್ರವೇ ಸಾರಿಗೆ ನೌಕರರ ವೇತನ ಹೆಚ್ಚಿಸಲಾಗುತ್ತೆ – ಸಚಿವ ಬಿ. ಶ್ರೀರಾಮುಲು Read More »

ತಾಯಿ ಗರ್ಭದಲ್ಲಿನ ಭ್ರೂಣಕ್ಕೆ ನಡೆಯಿತು ಹೃದಯದ ಶಸ್ತ್ರಚಿಕಿತ್ಸೆ| ದೇಶದಲ್ಲೇ ಮೊದಲ ಪ್ರಯೋಗ ಯಶಸ್ವಿ

ಸಮಗ್ರ ನ್ಯೂಸ್: ತಾಯಿಯ ಗರ್ಭದಲ್ಲಿರುವ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್ ಯಶಸ್ವಿಯಾಗಿ ನಡೆಸಿದೆ. ಸುಮಾರು 28 ವಾರಗಳ ಗರ್ಭಿಣಿ ಭ್ರೂಣದ ಹೃದಯದ ಮೇಲೆ ಕಾರ್ಯವಿಧಾನವನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರೂಣದ ಹೃದಯದ ಗಾತ್ರ ಇನ್ನೂ ದ್ರಾಕ್ಷಿಯಂತೆ ತುಂಬಾ ಚಿಕ್ಕದಾಗಿತ್ತು. ಹೀಗಾಗಿ, ಅಲ್ಟ್ರಾಸೌಂಡ್ ಸಹಾಯದಿಂದ, ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿ ಸೂಜಿಯನ್ನು ಸೇರಿಸುವ ಮೂಲಕ, ಕೇವಲ 90 ಸೆಕೆಂಡುಗಳಲ್ಲಿ, ಭ್ರೂಣದ ಹೃದಯವನ್ನು ಸಂಸ್ಕರಿಸಲಾಯಿತು ಮತ್ತು ಅದರ ಕವಾಟದ ಅಡಚಣೆಯನ್ನು ತೆರೆಯಲಾಯಿತು ಎಂದು ಏಮ್ಸ್‌ನ ಕಾರ್ಡಿಯಾಕ್ ಸೆಂಟರ್‌ನ ಹಿರಿಯ ವೈದ್ಯರು ಹೇಳಿದ್ದಾರೆ.

ತಾಯಿ ಗರ್ಭದಲ್ಲಿನ ಭ್ರೂಣಕ್ಕೆ ನಡೆಯಿತು ಹೃದಯದ ಶಸ್ತ್ರಚಿಕಿತ್ಸೆ| ದೇಶದಲ್ಲೇ ಮೊದಲ ಪ್ರಯೋಗ ಯಶಸ್ವಿ Read More »

ಇಂಥವರ ಕಾಲಿಗೆ ಬಿದ್ದರೆ ಶುಭಫಲ ದೊರಕದು| ಆಚಾರ್ಯ ಚಾಣಕ್ಯರ ಪ್ರಕಾರ ಈ ಪದ್ದತಿ ಬಹಳ ಒಳ್ಳೆಯದು

ಸಮಗ್ರ ನ್ಯೂಸ್: ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ..‌ ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು

ಇಂಥವರ ಕಾಲಿಗೆ ಬಿದ್ದರೆ ಶುಭಫಲ ದೊರಕದು| ಆಚಾರ್ಯ ಚಾಣಕ್ಯರ ಪ್ರಕಾರ ಈ ಪದ್ದತಿ ಬಹಳ ಒಳ್ಳೆಯದು Read More »

ಹಾವೇರಿ: ಮುಸ್ಲಿಮರ ಮೇಲೆ ದೌರ್ಜನ್ಯ| 15 ಮಂದಿ ಸಂಘಪರಿವಾರದ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮುಸ್ಲಿಮರ ಮನೆ, ಮಸೀದಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಯ ವೇಳೆ ಸುಮಾರು 150 ಜನರು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಸೀದಿಯ ಸಮೀಪಕ್ಕೆ ತೆರಳಿ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದರು. ಈ ಕುರಿತು ಮಾಹಿತಿ ನೀಡಿದ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್, ಸುಮಾರು 8–10 ಮನೆಗಳು ಹಾಗೂ ಎರಡು

ಹಾವೇರಿ: ಮುಸ್ಲಿಮರ ಮೇಲೆ ದೌರ್ಜನ್ಯ| 15 ಮಂದಿ ಸಂಘಪರಿವಾರದ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »