March 2023

ನಾನೇನು ಇತಿಹಾಸಕಾರನಲ್ಲ; ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ, ತಪ್ಪಿದ್ದರೆ ಕ್ಷಮಿಸಿ – ಮಿಥುನ್ ರೈ

ಸಮಗ್ರ ನ್ಯೂಸ್: ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್‌ ನಾಯಕ ಮಿಥುನ್‌ ರೈ ಸ್ಪಷ್ಟನೆ ನೀಡಿದ್ದು, ಈ ವಿಚಾರ ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ ಎಂದಿದ್ದಾರೆ. ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್‌ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು. ಇದು […]

ನಾನೇನು ಇತಿಹಾಸಕಾರನಲ್ಲ; ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ, ತಪ್ಪಿದ್ದರೆ ಕ್ಷಮಿಸಿ – ಮಿಥುನ್ ರೈ Read More »

ಬೇಸಿಗೆಯಲ್ಲಿ ನೀರು ಹರಿಸಲು 7 ಗಂಟೆ ತ್ರಿಫೇಸ್ ವಿದ್ಯುತ್| ರೈತರಿಗೆ ಸಿಎಂ ಅಭಯ

ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್‌ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿದ್ಯುತ್‌ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಖರೀದಿಸುವ ಕುರಿತು ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್‌ ಸೆಟ್‌ ಗಳಿಗೆ ನಿರಂತರ ಏಳು ತಾಸು 3 ಫೇಸ್‌ ವಿದ್ಯುತ್‌ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯದ ವಿವಿಧೆಡೆ ಕೆಐಎಡಿಬಿಯು ಭೂಸ್ವಾಧೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು

ಬೇಸಿಗೆಯಲ್ಲಿ ನೀರು ಹರಿಸಲು 7 ಗಂಟೆ ತ್ರಿಫೇಸ್ ವಿದ್ಯುತ್| ರೈತರಿಗೆ ಸಿಎಂ ಅಭಯ Read More »

ಮಂಗಳೂರಿನಲ್ಲಿ ದೇಶದಲ್ಲೇ ಅತ್ಯದಿಕ ತಾಪಮಾನ ದಾಖಲು| ಇನ್ನೂ ಹೆಚ್ಚಾಗಲಿದೆ ಬಿಸಿಲ ಧಗೆ| ಹಾಗಿದ್ರೆ ಮಳೆ ಯಾವಾಗ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೂಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದರ ನಡುವೆಯೇ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ದಾಖಲಾದ ಈ ತಾಪಮಾನ ಮಾರ್ಚ್‌ ತಿಂಗಳಿನಲ್ಲಿ 2010ರಿಂದೀಚೆಗಿನ ದಾಖಲೆಯ ಉಷ್ಣತೆಯಾಗಿದೆ. ಇದುವರೆಗೆ 2017ರಲ್ಲಿ 37.9 ಡಿ.ಸೆ. ದಾಖಲಾಗಿದ್ದು ದಾಖಲೆಯಾಗಿತ್ತು. ಆರು ದಿನಗಳ ಹಿಂದೆ ಅಂದರೆ, ಮಾ.

ಮಂಗಳೂರಿನಲ್ಲಿ ದೇಶದಲ್ಲೇ ಅತ್ಯದಿಕ ತಾಪಮಾನ ದಾಖಲು| ಇನ್ನೂ ಹೆಚ್ಚಾಗಲಿದೆ ಬಿಸಿಲ ಧಗೆ| ಹಾಗಿದ್ರೆ ಮಳೆ ಯಾವಾಗ? Read More »

ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ದಿಢೀರ್​ ಬೆಳವಣಿಗೆ ನಡೆದಿದ್ದು, ಬರೋಬ್ಬರಿ 13 ಬಿಜೆಪಿ ಮುಖಂಡರು ಪಕ್ಷ ತೊರೆದಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ಇವರೆಲ್ಲ AIADMK ಪಕ್ಷವನ್ನು ಸೇರುತ್ತಿದ್ದಾರೆ

ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಇಂದಿನಿಂದ (ಮಾ.9) ಮಾರ್ಚ್ 29 ರವರೆಗೆ ನಡೆಯಲಿದೆ. 7.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,63,698 ವಿದ್ಯಾರ್ಥಿಗಳು, 3,62,497 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಸಲು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ತಯಾರಿ‌ ಮಾಡಿಕೊಂಡಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ನಿಷೇಧ ಮೊದಲಾದ ಕಟ್ಟುನಿಟ್ಟಿನ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ಮಾಡಾಳ್ ತಳಿ ಅಡಿಕೆ ಬೆಳೆದು ಕೋಟಿ ಸಂಪಾದಿಸಿ| ಬಿಜೆಪಿ ವಿರುದ್ದ ಜೆಡಿಎಸ್ ಟೀಕಾ ಪ್ರಹಾರ

ಸಮಗ್ರ ನ್ಯೂಸ್: ‘ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದನೆ ಮಾಡ್ಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ!’ ಹೀಗೆ ವಿಡಂಬನಾತ್ಮಕವಾಗಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ಹರಿ ಹಾಯ್ದಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ

ಮಾಡಾಳ್ ತಳಿ ಅಡಿಕೆ ಬೆಳೆದು ಕೋಟಿ ಸಂಪಾದಿಸಿ| ಬಿಜೆಪಿ ವಿರುದ್ದ ಜೆಡಿಎಸ್ ಟೀಕಾ ಪ್ರಹಾರ Read More »

ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯಿಂದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 13,351 ಮಂದಿ ಆಯ್ಕೆಗೊಂಡಿದ್ದರೆ, ಅಂತಿಮ ಆಯ್ಕೆ ಪಟ್ಟಿಯಲ್ಲಿ 13,352 ಮಂದಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ದಿನಾಂಕ 04-03-2023ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹವಾದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ Read More »

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್

ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್ Read More »

ಕೊಟ್ಟಿಗೆಹಾರ: ಮೀಸಲು ಅರಣ್ಯದಲ್ಲಿ
ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆ

ಸಮಗ್ರ ನ್ಯೂಸ್:ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಸಾರಗೋಡು-ತತ್ಕೋಳ ಮೀಸಲು ಅರಣ್ಯದ ಕಂಡು ಬಂದಿದೆ. ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಕಾಟ್ರೆಜ್ ಎಂಬ ಅನುಮಾನ ವ್ಯಕ್ತವಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ‌ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳು

ಕೊಟ್ಟಿಗೆಹಾರ: ಮೀಸಲು ಅರಣ್ಯದಲ್ಲಿ
ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆ
Read More »

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ?

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಮೋಡಕವಿದ

ಹವಾಮಾನ ವರದಿ| ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ| ಕರಾವಳಿಯಲ್ಲಿ ಮಳೆ ಬರುತ್ತಾ? Read More »