Ad Widget .

ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು

ಸಮಗ್ರ ನ್ಯೂಸ್: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು.

Ad Widget . Ad Widget .

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಅವಧಿಯ ಚುನಾವಣೆ ಸಂದರ್ಭ 56 ಮಂದಿ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್‌ಜೆಂಡರ್) ಮತದಾರರಿದ್ದರೆ, ಈ ಬಾರಿ ಅವರ ಸಂಖ್ಯೆ 46ಕ್ಕೆ ಇಳಿಕೆಯಾಗಿದೆ ಎಂದರು.

Leave a Comment

Your email address will not be published. Required fields are marked *