Ad Widget .

ವಾಟ್ಸಪ್ ನಲ್ಲಿ ಚುನಾವಣಾ ಪ್ರಚಾರ ಮಾಡ್ತಿದೀರಾ? ಹಾಗಾದ್ರೆ ಹುಷಾರ್! ಮನೆ ಬಾಗಿಲಿಗೆ ಬರುತ್ತೆ ನೋಟೀಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ವಾಟ್ಸಾಪ್‌ ಗ್ರೂಪ್‌ನಲ್ಲಿ ಪಕ್ಷದ ಚಿಹ್ನೆ ಬಳಸಿ ರಾಮನವಮಿಗೆ ಶುಭ ಕೋರಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಮಂತರ್‌ ಗೌಡ ಅವರಿಗೆ ಚುನಾವಣಾಧಿಕಾರಿ ನೋಟಿಸ್‌ ನೀಡಿದ್ದಾರೆ.

Ad Widget . Ad Widget .

ಅದೇ ರೀತಿ, ಕುಶಾಲನಗರ ವಾಟ್ಸಾಪ್‌ ಗ್ರೂಪ್‌ನಲ್ಲಿ ರಾಜಕೀಯ ಪ್ರೇರಿತ ವಿಡಿಯೋ ತುಣುಕು ಹಂಚಿಕೊಂಡಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ವಿ.ಪಿ.ಶಶಿಧರ್‌ ಅವರಿಗೂ ಚುನಾವಣಾಧಿಕಾರಿ ನೋಟಿಸ್‌ ಜಾರಿಗೊಳಿಸಿದ್ದಾರೆ.

Ad Widget . Ad Widget .

ಗುರುವಾರ ರಾಮನವಮಿ ಹಿನ್ನೆಲೆಯಲ್ಲಿ ಮಂತರ್‌ ಗೌಡ ತಮ್ಮ ವಾಟ್ಸಾಪ್‌ ಗ್ರೂಪ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿ ಕ್ಷೇತ್ರದ ಜನರಿಗೆ ರಾಮನವಮಿಯ ಶುಭಾಶಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಚುನಾವಣಾಧಿಕಾರಿ ಯತೀಶ್‌ ಉಳ್ಳಾಲ ಅವರು ನೋಟಿಸ್‌ ಜಾರಿ ಮಾಡಿದ್ದಾರೆ. ‘ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹೀಗಾಗಿ, ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ ತಲುಪಿದ 24 ಗಂಟೆಯೊಳಗೆ ಈ ಬಗ್ಗೆ ಲಿಖಿತವಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.

ಶಶಿಧರ್‌ ಅವರಿಗೆ ನೀಡಿರುವ ನೋಟಿಸ್‌ನಲ್ಲಿ, ‘ನೀವು ಅಡ್ಮಿನ್‌ ಆಗಿರುವ ನಮ್ಮ ಕುಶಾಲನಗರ ವಾಟ್ಸಾಪ್‌ ಗ್ರೂಪ್‌ನ ಮೂಲಕ ಯಾವುದೇ ಪೂರ್ವಾನುಮತಿ ಪಡೆಯದೇ ರಾಜಕೀಯ ಪ್ರೇರಿತ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಈ ಬಗ್ಗೆ ನಿಮ್ಮ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು? ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು’ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *