Weather report| ಹವಾ ವರ್ತಮಾನ| ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 1ರಂದು ಗುಡುಗು ಸಹಿತ ಮಳೆಯು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಆಗಲಿದೆ ಎಂದು ತಿಳಿಸಿದೆ.

Ad Widget

ಏಪ್ರಿಲ್ 2ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಈ ಬಳಿಕ ಎಂದಿನಂತೆ ಬಿಸಿಲ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *