Ad Widget .

ರಾಜ್ಯಕ್ಕೆ ಉಷ್ಣ ಮಾರುತ ಆತಂಕ| ಹೆಚ್ಚಾಗ್ತಿದೆ ಸುಡುಬಿಸಿಲು; ಜನತೆ ತತ್ತರ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಈ ಬಾರಿ ದಿನದಿಂದ ದಿನಕ್ಕೆ ಸುಡುಬಿಸಿಲು ಹೆಚ್ಚುತ್ತಿದ್ದು, ಉಷ್ಣ ಮಾರುತ ಆತಂಕ ಶುರುವಾಗಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 38-39 ಆಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ.

Ad Widget . Ad Widget . Ad Widget .

ಏಪ್ರಿಲ್ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಏಪ್ರಿಲ್ ಮೊದಲನೇ ವಾರದಲ್ಲಿ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಭಾಗದಲ್ಲಿ ಈ ಬಾರಿ ಚಳಿಯ ವಾತಾವರಣ ಹೆಚ್ಚಿತ್ತು. ಹಾಗೆಯೇ ಬೇಸಿಗೆಯ ಬಿಸಿಲಿನ ತಾಪವೂ ಹೆಚ್ಚಾಗಲಿದೆ.

ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಬಳ್ಳಾರಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿರುತ್ತದೆ. ಆದರೆ, ಈ ಬಾರಿ ಅದು 45-46 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಸರಾಸರಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಗೆಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *