ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಆಪ್ತ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರು, ಹಿರಿಯ ಸಹಾಯಕರು, ಕ್ಷೇತ್ರ ನಿರೀಕ್ಷಿಕ್ಷಕರು, ಜೂನಿಯರ್ ಪ್ರೋಗ್ರಾಂ, ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕರು, ಪದವೀಧರ ಗುಮಾಸ್ತರು, ಗುಮಾಸ್ತರು ಸೇರಿದಂತೆ 757 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ವಿವಿಧ ಶ್ರೇಣಿಗಳ ಹುದ್ದೆಗಳಿಗೆ ಅನುಸಾರವಾಗಿ 11,600 ರೂ.ಯಿಂದ 97,100 ರೂವರೆಗೆ ವೇತನ ನಿಗದಿಸಲಾಗಿದೆ. ಹುದ್ದೆಗೆ ಅನುಸಾರವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಪದವಿ ಹೊಂದಿರಬೇಕು.
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 17ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನ. ಶುಲ್ಕ ಪಾವತಿಗೆ ಮೇ 20 ಕಡೆಯ ದಿನ ಆಗಿರಲಿದೆ.
ಹುದ್ದೆಗಳ ವರ್ಗೀಕರಣ, ಅರ್ಜಿ ಸಲ್ಲಿಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಮೇ 15ರಂದು ಪ್ರಕಟಿಸಲಾಗುತ್ತದೆ. ಈ ಪ್ರಕಟಣೆ ಬಳಿಕ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಗಳನ್ನು ಅರ್ಥೈಸಿಕೊಂಡು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸದ್ಯ ಕೆಇಎ ಹೊರಡಿಸಿರುವ ಅಧಿಕೃತ ಕಿರು ಅಧಿಸೂಚನೆ ವೀಕ್ಷಣೆಗೆ kea.kar.nic.in ಈ ಲಿಂಕ್ಗೆ ಅಭ್ಯರ್ಥಿಗಳು ಭೇಟಿ ನೀಡಬಹುದು.