Ad Widget .

ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿ ಐವರ ಮೇಲೆ ದೂರು ದಾಖಲು| ಪರಾರಿಯಾದ ಕೆರೆಹಳ್ಳಿ ಬಂಧನ?

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ.

Ad Widget . Ad Widget .

ಪರಾರಿಯಾಗಿರುವ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲೇ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್ ಜಹೀರ್ ಅವರೊಂದಿಗೆ ಪಾಷಾ ಸುಮಾರು 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಶುಕ್ರವಾರ ರಾತ್ರಿ 11.45ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ ಕಾರಿನಲ್ಲಿ ಗ್ಯಾಂಗ್ ಸದಸ್ಯರು ಬಂದಾಗ, ಅಪಾಯದ ಮುನ್ಸೂಚನೆಯನ್ನು ಅರಿತ ಪಾಷಾ ಮತ್ತು ಇರ್ಫಾನ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಜಹೀರ್ ಸಿಕ್ಕಿಬಿದ್ದಿದ್ದು, ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಅವರು (ಮುಸ್ಲಿಮರು) ಇಲ್ಲಿ ವಾಸಿಸಬಾರದು ಮತ್ತು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಆರೋಪಿಗಳು ಹೇಳಿದ್ದರು. ಪುನೀತ್ ಕೆರೆಹಳ್ಳಿ ಅವರು 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಜಹೀರ್ ಗ್ಯಾಂಗ್ ಸದಸ್ಯರಿಗೆ ವಿವರಿಸಲು ಪ್ರಯತ್ನಿಸಿದರೂ, ಅವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆದೊಯ್ದಿದ್ದು, ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಡಿ ಕೆರೆಹಳ್ಳಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಬಂಧನ?
ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿದೆ ಎಂದು ಹೇಳಲಾಗಿದೆ. ಇದೀಗ ಇದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಪತ್ತೆಯಾಗಿದ್ದು, ಇದೇ ಪ್ರಕರಣದಲ್ಲಿ ಇದೀಗ ರಾಮನಗರ ಪೊಲೀಸರು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *