Ad Widget .

ಮಾನಹಾನಿ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು‌ ಮಂಜೂರು

ಸಮಗ್ರ ನ್ಯೂಸ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ.

Ad Widget . Ad Widget .

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ.

Ad Widget . Ad Widget .

2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು ಆಧರಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

Leave a Comment

Your email address will not be published. Required fields are marked *