Ad Widget .

ಸುಳ್ಯ: ತಂದೆಯಿಂದಲೇ ಮಗನ ಭೀಕರ ಹತ್ಯೆ| ಕೋಳಿ ಸಾಂಬಾರ್ ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ಆರಂಭವಾಗಿ ಮಾತಿಗೆ ಮಾತು ಬೆಳೆದು ತಂದೆ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ.

Ad Widget . Ad Widget .

ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಹಾಗೂ ಮಗ ಶಿವರಾಮ(32) ಎಂಬವರಿಗೆ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು.

Ad Widget . Ad Widget .

ಮನೆಯಲ್ಲಿ ಕೋಳಿ ಪದಾರ್ಥ ಮಾಡಿದ್ದು, ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ಏಟು ಬಲವಾಗಿ ಬಿದ್ದು ತಲೆಯ ಬುರುಡೆ ಒಡೆದಿದ್ದು, ಇದರಿಂದ ಶಿವರಾಮ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ. ಶಿವರಾಮರ ಮೃತ ದೇಹವನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Leave a Comment

Your email address will not be published. Required fields are marked *