ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕರಾವಳಿ ಭಾಗದಲ್ಲೂ ಗೆಲುವಿಗೆ ಬಿಜೆಪಿ ‘ಹೊಸ’ ತಂತ್ರ ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಬಿಜೆಪಿ ಭದ್ರಕೋಟೆಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಕೇಸರಿಪಡೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಹಾಗಾದರೆ, ಯಾರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವಿವರ ಇಲ್ಲಿದೆ.
ಯಾರಿಗೆ ಟಿಕೆಟ್ ಡೌಟ್!
ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಒಂಬತ್ತನೇ ಬಾರಿಗೆ ಸ್ಪರ್ಧಿಸಲು ಸಚಿವ ಎಸ್. ಅಂಗಾರರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಬಲ್ಲ ಮೂಲಗಳು ವರದಿ ಮಾಡಿವೆ.
ಬೆಂಗಳೂರಿನಲ್ಲಿ ನಡೆದ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಈ ವಿಚಾರ ಚರ್ಚೆಗೊಳಪಟ್ಟಿದ್ದು, ಕ್ಷೇತ್ರಕ್ಕೆ ಹೊಸ ಮುಖ ಪರಿಚಯಿಸಲು ಬಿಜೆಪಿ ವರೀಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರನ್ನು ಅಣಬೆಗಳೆಂದು ಕರೆದ ಪುತ್ತೂರು ಶಾಸಕ ಸಂಜೀವ ಮಠಂದೂರುರವರಿಗೂ ಟಿಕೆಟ್ ಸಿಗುವ ಚಾನ್ಸ್ ಬಹುತೇಕ ಡೌಟ್. ಪುತ್ತೂರು ಕ್ಷೇತ್ರಕ್ಕೂ ಹೊಸ ಮುಖ ಪರಿಚಯಿಸಲು ಬಿಜೆಪಿ ನಿರ್ಧರಿಸಿದ್ದು, ಈ ನಡುವೆ
ಮುಲ್ಕಿ ಮೂಡಬಿದರೆ ಹಾಲಿ ಶಾಸಕ ಉಮಾನಾಥ್ ಕೋಟ್ಯಾನ್ ಗೂ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.
ಮಂಗಳೂರಿನಲ್ಲಿ ಆಂತರಿಕ ಚುನಾವಣೆ ಮೂಲಕ ಅಭಿಪ್ರಾಯ ಸಂಗ್ರಹಿಸಿದ್ದು, ಇದರ ಆಧಾರದ ಮೇಲೆ ಅಭ್ಯರ್ಥಿಗಳ ಬದಲಾವಣೆಗೆ ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಜೊತೆ ನೇರ ಪೈಪೋಟಿ ಇರುವ ಕ್ಷೇತ್ರಗಳ ಮೇಲೆ ಬಿಜೆಪಿ ಪೋಕಸ್ ಮಾಡಿದೆ. ಕರಾವಳಿ ಭಾಗದಲ್ಲಿ ಕೇಸರಿ ಪ್ರಯೋಗಕ್ಕೆ ಮುಂದಾಗಿದ್ದು ಎಷ್ಟು ಲಾಭವಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.