Ad Widget .

ಗೋ ಸಾಗಾಟ ಆರೋಪದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ| ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ಬಂಧನ

ಸಮಗ್ರ ನ್ಯೂಸ್: ಕನಕಪುರದ ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.

Ad Widget . Ad Widget .

ಇವರು ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನ ತಡೆದಿದೆ. ಈ ವೇಳೆ ಅದರಲ್ಲಿ ಇದ್ದ ಇದ್ರೀಸ್ ಪಾಷಾ ಮತ್ತೊಬ್ಬರು ತಪ್ಪಿಸಿಕೊಂಡಿದ್ದರು. ಅವರನ್ನು ಬೆನ್ನಟ್ಟಿದ ಕೆರೆಹಳ್ಳಿ ತಂಡ ಥಳಿಸಿ ಹತ್ಯೆ ಮಾಡಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸಂದರ್ಭ ವಾಹನದಿಂದ ಇಳಿದು ಇದ್ರೀಸ್ ಪಾಷಾ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿತ್ತು.

Leave a Comment

Your email address will not be published. Required fields are marked *