ಮುಲ್ಕಿ: ಅಪ್ರಾಪ್ತೆಯ ಅತ್ಯಾಚಾರಗೈದಾತ‌ ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ವಥ್ (೨೨) ಎಂದು ಗುರುತಿಸಲಾಗಿದೆ.

Ad Widget ... ..

ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಮಣಿಪಾಲ ಲಾಡ್ಜ್ ಒಂದರಲ್ಲಿ ಅತ್ಯಾಚಾರ ಮಾಡಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ.

Ad Widget

ಈ ಬಗ್ಗೆ ಯುವತಿಯ ಮನೆಯವರು ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Leave a Comment

Your email address will not be published. Required fields are marked *