Ad Widget .

Weather report: ಹವಾಮಾನ ವರದಿ| ರಾಜ್ಯದ ಈ ಭಾಗಗಳಲ್ಲಿ ಎ.12 ರಿಂದ 20ರವರೆಗೆ ಮಳೆ ಮುನ್ಸೂಚನೆ| ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು!!

ಸಮಗ್ರ ನ್ಯೂಸ್: ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ತುಮಕೂರಿನ ಮಧ್ಯ ಹಾಗೂ ಪೂರ್ವ ಭಾಗದ ತಾಲೂಕುಗಳು, ರಾಮನಗರದ ಮಧ್ಯಭಾಗ, ಕೊಪ್ಪಳದ ಪೂರ್ವ ಭಾಗ, ರಾಯಚೂರಿನ ದಕ್ಷಿಣ ಭಾಗದ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Ad Widget . Ad Widget . Ad Widget .

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ದ.ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನದ ನಂತರ ಸುರಿದ ದಿಢೀರ್‌ ಮಳೆಗೆ ವೈಟ್‌ಫಿಲ್ಡ್‌, ಮಾರತ್ತಹಳ್ಳಿ, ದೇವನಹಳ್ಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಯಿತು. ಪ್ರಮುಖ ರಸ್ತೆಗಳಲ್ಲಿಯೇ ಒಂದು ಅಡಿಯಷ್ಟುನೀರು ನಿಂತಿದೆ. ಐಟಿ ಕಾರಿಡಾರ್‌ ಎಂದು ಕರೆಸಿಕೊಳ್ಳುವ ವೈಟ್‌ ಫಿಲ್ಡ್‌ನಲ್ಲಿ ಬಿದ್ದ ಮಳೆಯ ನೀರು ರಸ್ತೆಯಲ್ಲಿ ಜಮಾವಣೆಗೊಂಡು ಟ್ರಾಫಿಕ್‌ ಸಮಸ್ಯೆ ಉಂಟಾಯಿತು. ಕಾಡುಬೀಸನಹಳ್ಳಿ ಅಂಡರ್‌ಪಾಸ್‌ ಸೇರಿದಂತೆ ಮೊದಲಾದ ಕಡೆ ನೀರು ನಿಂತಿತ್ತು. ವರ್ತೂರು ಮುಖ್ಯರಸ್ತೆಯಲ್ಲಿ ಭಾರೀ ಪ್ರಮಾಣ ನೀರು ನಿಂತುಕೊಂಡಿತ್ತು. ಇದರಿಂದ ಸಾರ್ವಜನಿಕರು ವಾಹನ ದಟ್ಟಣೆ ಎದುರಿಸಬೇಕಾಯಿತು.

ಯಲಹಂಕ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸುತ್ತಮುತ್ತ ಮಂಗಳವಾರ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ಬೆಂಗಳೂರಿನತ್ತ ಆಗಮಿಸಿದ ವಿಮಾನಗಳ ಇಳಿಯುವಿಕೆ ಮತ್ತು ಇಲ್ಲಿಂದ ಬೇರೆಡೆಗೆ ಹೋಗುವ ವಿಮಾನಗಳ ಹಾರಾಟ ವಿಳಂಬವಾಯಿತು.

Leave a Comment

Your email address will not be published. Required fields are marked *