ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೆಕ್ಕಿಲಾಡಿ ಮೂಲದ ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಕೆಲ ಫೊಟೊಗಳು ಫೇಸ್ ಬುಕ್, ವಾಟ್ಸಾಪ್ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಈ ಕುರಿತು ಶಾಸಕ ಮಠಂದೂರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಮಠಂದೂರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಚುನಾವಣಾ ಸಂದರ್ಭ, ಅದರಲ್ಲೂ ಟಿಕೆಟ್ ಘೋಷಣೆಗೆ ಪಕ್ಷ ಸಿದ್ದತೆ ನಡೆಸುತ್ತಿರುವ ವೇಳೆ ಮಾನ ಹಾನಿ ಮಾಡುವ ದುರುದ್ದೇಶದಿಂದ ಎಡಿಟೆಡ್ ಫೋಟೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿರುವುದಾಗಿ ಶಾಸಕ ಮಠಂದೂರು ತಿಳಿಸಿದ್ದಾರೆ.