Ad Widget .

ಅವಕಾಶ ಇದ್ದಾಗ ಲಿಂಕ್ ಮಾಡ್ಕೋಬೇಕಿತ್ತು; ಈಗ ದಂಡಕ್ಕೆ ಅರಚಿಕೊಂಡ್ರೆ‌ ಏನು ಪ್ರಯೋಜನ? ಆಧಾರ್ – ಪ್ಯಾನ್ ಲಿಂಕ್ ದಂಡವನ್ನು ಸಮರ್ಥಿಸಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ಆಧಾರ್ ಹಾಗೂ ಪ್ಯಾನ್ ನಂಬರ್ ಲಿಂಕ್ ಮಾಡಲು ದಂಡ ವಿಧಿಸಿರುವ ಕ್ರಮವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಮರ್ಥಿಸಿಕೊಂಡಿದ್ದಾರೆ.

Ad Widget . Ad Widget .

ಅವಕಾಶ ಇದ್ದಾಗ ಆಧಾರ್-ಪ್ಯಾನ್ ಲಿಂಕ್ ಮಾಡಬೇಕಿತ್ತು. ಗಡುವು ಮುಗಿದ ಮೇಲೆ ದಂಡ ಹಾಕಲಾಗಿದೆ. ಈಗ ದಂಡ ಕಟ್ಟಿ ಲಿಂಕ್ ಮಾಡಬೇಕಿದೆ. ಈ‌ ಗಡುವೂ‌ ಮುಗಿದರೆ ದಂಡದ ಪ್ರಮಾಣ ಹೆಚ್ಚಾಗಲಿದೆ. ಇದು ಅನಿವಾರ್ಯ. ಕಾನೂನಾತ್ಮಕವಾಗಿಯೇ ದಂಡ ವಿಧಿಸಲಾಗಿದೆ ಎಂದು ಹೇಳಿದರು.

Ad Widget . Ad Widget .

ಇದೇ ಸಂದರ್ಭದಲ್ಲಿ ಕಾಂಗ್ರೆಸ್​ನ ಉಚಿತ ಯೋಜನೆಗಳ ಘೋಷಣೆ ಕುರಿತು ಮಾತನಾಡಿದ ಅವರು ಉಚಿತ ಯೋಜನೆಗಳು ಹಣಕಾಸು ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಕಾಂಗ್ರೆಸ್​ನ ಘೋಷಣೆಗಳಿಂದ 1 ಲಕ್ಷ ಕೋಟಿ ರೂ. ಹೆಚ್ಚುವರಿಯಾಗಿ ಬೇಕಾಗುತ್ತದೆ. ಆದರೆ, ಇದು ಸಾಧ್ಯವಿಲ್ಲ. ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ತಿಳಿಸಿದರು.

Leave a Comment

Your email address will not be published. Required fields are marked *