Ad Widget .

ವಿಜಯಪುರ: ರಥದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ.

Ad Widget . Ad Widget .

ಗೋಲಗೇರಿ ನಿವಾಸಿ ಮುದುಕಣ್ಣ ಕಾಚಾಪುರ(50) ಮೃತ ದುರ್ದೈವಿ. ಈತ ಮೇಲಿನಿಂದ ಕೆಳಕ್ಕೆ ಬಿದ್ದ ಸಂದರ್ಭದಲ್ಲಿ ರಥದ ಬಳಿ ನಿಂತಿದ್ದ ಮತ್ತೋರ್ವನಿಗೆ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆಗೆ ಒಳಪಡಿಸಲಾಗಿದೆ.

Ad Widget . Ad Widget .

ಮೃತ ಮುದುಕಣ್ಣ ಕಾಚಾಪುರ ಸುಮಾರು 70 ಅಡಿ ಎತ್ತರದ ರಥದ ಮೇಲೇರಿ ಕಳಶ ಕಟ್ಟುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *