Ad Widget .

ಮುಲ್ಕಿ: ಹಿಂದೂ – ಮುಸ್ಲಿಂ ಸೌಹಾರ್ದತೆಯ ಕೊಂಡಿ ಬಪ್ಪನಾಡು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ| ಮನವಿ ಸಲ್ಲಿಸಿದರೂ ನಿರಾಕರಿಸಿದ ಆಡಳಿತ ಮಂಡಳಿ

800 ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ.

Ad Widget . Ad Widget .

ಎ.5ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ.

Ad Widget . Ad Widget .

ಈ ಮಧ್ಯೆ ಮಂಗಳವಾರ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಮುಸ್ಲಿಂ ವ್ಯಾಪಾರಿಗಳು ದೇವಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಇಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ನಿರಾಕರಿಸಿ ವ್ಯಾಪಾರಿಗಳನ್ನು ಹಿಂದೆ ಕಳುಹಿಸಲಾಗದೆ ಎಂದು ವ್ಯಾಪಾರಿಗಳು ದೂರಿದ್ದಾರೆ.

ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಿಂದುತ್ವ ಸಂಘಟನೆಗೆ ಸೇರಿದವರೆನ್ನಲಾದ ಕೆಲವರು ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿಯೊಂದನ್ನು ಸಲ್ಲಿಸಿದ್ದರು.

ಈ ಮನವಿಯಲ್ಲಿ “ಹಿಂದೂ ಧಾರ್ಮಿಕ ದತ್ತಿ ನಿಯಮ 2002ರಂತೆ ದೇವಸ್ಥಾನದ ಆವರಣದಲ್ಲಿ ಇತರ ಮತೀಯರು ವ್ಯಾಪಾರ ಮಾಡುವಂತಿಲ್ಲ. ಇಲಾಖೆಯ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಈ ಮನವಿಯನ್ನು ಮುಂದಿಟ್ಟು ಕೊಂಡು ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎನಿಸಿಕೊಂಡಿರುವ ಮತ್ತು ಮುಸಲ್ಮಾನರೇ ನಿರ್ಮಿಸಿರುವ ಬಪ್ಪನಾಡು ದೇವಸ್ಥಾನದ ಜಾತ್ರಾ ಮಹೊತ್ಸವದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Comment

Your email address will not be published. Required fields are marked *