Ad Widget .

ರಾಹುಲ್ ಗಾಂಧಿ ವಿರುದ್ಧ ತೀರ್ಪು ವಿಚಾರ| ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್ ಮುಖಂಡ

ಚೆನ್ನೈ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಪಕ್ಷದ ನಾಯಕ ಬೆದರಿಕೆ ಹಾಕಿದ್ದು, ಈ ಕುರಿತು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget . Ad Widget .

ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀರವ್ ಮೋದಿ, ಲಲಿತ್ ಮೋದಿ ಮತ್ತು ಎಲ್ಲಾ ಕಳ್ಳರ ಹೆಸರುಗಳು ಹೇಗೆ ಮೋದಿ ಎಂದು ಟೀಕಿಸಿದರು. ಈ ಹೇಳಿಕೆಗಾಗಿ 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾರ್ಚ್ 23ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು.

Ad Widget . Ad Widget .

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಸಂಸದ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ರಾಹುಲ್ ಗಾಂಧಿ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ವಿರೋಧ ಪಕ್ಷದ ನಾಯಕರ ದನಿ ಅಡಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

Leave a Comment

Your email address will not be published. Required fields are marked *