ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.
ಶುಕ್ರವಾರ ಸಂಜೆ ವೇಳೆಗೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.
ರಾಯಚೂರಿನ ಗಬ್ಬೂರು, ವಿಜಯಪುರ, ಆಲಮಟ್ಟಿ, ಚಿಕ್ಕ ಮಗಳೂರು, ಬೀದರ್‌ನ ಹುಮನಾ ಬಾದ್, ಕಲಬುರಗಿಯ ಖಜೂರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಧಾರವಾಡದ ಕುಂದಗೊಳ, ಯಾದಗಿರಿಯ ಕೆಂಬಾವಿ, ಚಿಕ್ಕಮಗಳೂರಿನ ಎನ್.ಆರ್.ಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.