ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತ ಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇಂದು ನಿಂತಿಕಲ್ಲಿನಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ನಂದಕುಮಾರ್ ಗೆ ಬಿ ಫಾರಂ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೊರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.
ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್‌ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಅಭ್ಯರ್ಥಿ ಬದಲಾವಣೆ ಮಾಡಿ ನಂದಕುಮಾರ್ ಅವರಿಗೆ ಬಿಫಾರಂ ನೀಡಬೇಕು. ತಪ್ಪಿದಲ್ಲಿ ನಂದಕುಮಾರ್ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸುವುದು ಅಥವಾ ಚುನಾವಣೆಯಲ್ಲಿ ತಟಸ್ಥ ನಿಲುವು ತಳೆಯುವ ನಿರ್ಧಾರವನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ನಂದಕುಮಾರ್ ಅವರು ಪಕ್ಷೇತರರಾಗಿ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಒಕ್ಕೊರಲಿನಿಂದ ಆಗ್ರಹಿಸಿದರು. ಈ ಹಿನ್ನಲೆಯಲ್ಲಿ ಬಿಫಾರಂ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಅಭಿಪ್ರಾಯದಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಾಲಕೃಷ್ಣ ಬಳ್ಳೇರಿ ಅವರು ಹೇಳಿದರು.
ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.