Ad Widget .

ಕೊಟ್ಟಿಗೆಹಾರ: ಕಂದಕಕ್ಕೆ ಉರುಳಿ ಬಿದ್ದ ಕಾರು|ಓರ್ವ ಮಹಿಳೆ ಸಾವು ಮತ್ತೋರ್ವ ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ‌ ಓರ್ವ ಮಹಿಳೆ ಸಾವನಪ್ಪಿದ್ದು ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

Ad Widget . Ad Widget .

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರಂದು ರಾತ್ರಿ ಕೊಪ್ಪದಲ್ಲಿ ಸಂಬಂಧಿಕರೊಬ್ಬರು ಸಾವನ್ನಪ್ಪಿದ್ದು ಅವರ ಅಂತ್ಯಸಂಸ್ಕಾರಕ್ಕೆ ಹೋಗಿ ಮರಳುತ್ತಿದ್ದ ವೇಳೆ ಈ ಅವಘಡ‌ ನಡೆದಿತ್ತು.

Ad Widget . Ad Widget .

ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು.

ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆ ಹಾಗೂ ಉಜಿರೆ ಆಸ್ಪತ್ರೆಗೆ ದಾಖಲಿಸಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ
ಸರೋಜಿನಿ ಶೆಟ್ಟಿ ಅವರು ಮಂಗಳೂರಿನಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

Leave a Comment

Your email address will not be published. Required fields are marked *