ಸಮಗ್ರ ನ್ಯೂಸ್: ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.
ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ.