Ad Widget .

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

Ad Widget . Ad Widget .

ಮಂಗಳವಾರ ನಡೆದ ನಂದಕುಮಾರ್ ಅಭಿಮಾನಿ ಕಾರ್ಯಕರ್ತರ ಕೋರ್ ಕಮಿಟಿ ಸಭೆಯಲ್ಲಿ ನಂದಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಯಿತು. ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಏ.12ರಂದು ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಾಗುವುದು ಎಂದು ನಂದಕುಮಾರ್ ಅಭಿಮಾನಿಗಳ ಬಳಗದ ಸಹ ಸಂಚಾಲಕ ಸಚಿನ್‌ರಾಜ್ ಶೆಟ್ಟಿ ತಿಳಿಸಿದ್ದಾರೆ.

Ad Widget . Ad Widget .

ನಿಂತಿಕಲ್ಲಿನಲ್ಲಿ ನಡೆದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ನಂದಕುಮಾರ್ ಸ್ಪರ್ಧೆ ನಡೆಸಬೇಕು ಎಂದು ಕಾರ್ಯಕರ್ತರ ಒತ್ತಡದ ಮೇರೆಗೆ ಕಾಂಗ್ರೆಸ್ ಬಿ ಫಾರಂ ನೀಡದಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲು ನಿರ್ಧರಿಸಿತ್ತು. ಕಾರ್ಯಕರ್ತರ, ಅಭಿಮಾನಿಗಳ ಹಾಗು ಸ್ನೇಹಿತರ ಅಭಿಪ್ರಾಯದ‌ ಮೇರೆಗೆ ಚುನಾವಣಾ ಕಣಕ್ಕೆ ಇಳಿಯುವುದಾಗಿ ನಂದಕುಮಾರ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *