ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಸಮಗ್ರ ನ್ಯೂಸ್: ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಗೆ ಟಿಕೆಟ್ ತಪ್ಪಿದ್ದು, ಇದರಿಂದ ಬೇಸರಗೊಂಡ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.

Ad Widget ... ..

ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾದ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.

Ad Widget

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.

ನಾನು ಹೊಸದುರ್ಗ ಕ್ಷೇತ್ರದಲ್ಲಿ ಈ ಭಾರಿಯ ಚುನಾವಣೆಯಲ್ಲಿ ಸ್ಪರ್ಧಿಸೋದಂತು ನಿಜ. ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ. ನನ್ನ ನಂಬಿರುವ ಕಾರ್ಯಕರ್ತರಿಗೆ ಅನ್ಯಾಯ ಮಾಡಲಾರೆನು. ನಾಳೆ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

Leave a Comment

Your email address will not be published. Required fields are marked *