Ad Widget .

ಇಂದಿನಿಂದ ರಾಜ್ಯದಲ್ಲಿ ಚುನಾವಣಾ ಹಬ್ಬ ಶುರು| ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟ; ಚುನಾವಣಾ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು‌ ಗುರುವಾರ (ಏ 13) ಮುಂಜಾನೆ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಸೂಚನೆ ಮೇರೆಗೆ ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದ್ದು, ಇಂದಿನಿಂದ ಚುನಾವಣಾ ವಿಧಿವಿಧಾನಗಳು ಅಧಿಕೃತವಾಗಿ ಆರಂಭಗೊಂಡಂತೆ ಆಗಿವೆ.

Ad Widget . Ad Widget .

ಅಧಿಸೂಚನೆಯ ಪ್ರಕಾರ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20, ನಾಮಪತ್ರ ಪರಿಶೀಲನೆಗೆ ಏ 21, ನಾಮಪತ್ರ ಹಿಂಪಡೆಯಲು ಏ 24 ಕೊನೆಯ ದಿನ. ಮೇ 10ರಂದು ಮತದಾನ ನಡೆಯಲಿದೆ. ಮೇ 15ರ ಒಳಗೆ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯವಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮತದಾನಕ್ಕೆ ಬೆಳಿಗ್ಗೆ 7ರಿಂದ ಸಂಜೆ 6ರವರೆಗಿನ ಅವಧಿಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕದಲ್ಲಿ ಮತಎಣಿಕೆ ಮೇ 13ರಂದು ನಡೆಯಲಿದೆ ಎಂದು ಈ ಮೊದಲು ಚುನಾವಣಾ ಆಯೋಗವು ತಿಳಿಸಿತ್ತು.

Ad Widget . Ad Widget .

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆಯಲಿದೆ. 112 ಶಾಸಕರನ್ನು ಪಡೆಯುವ ಪಕ್ಷ ಅಧಿಕಾರ ರಚಿಸಲಿದೆ. ಹಾಲಿ ಅಸ್ತಿತ್ವದಲ್ಲಿರುವ 15ನೇ ವಿಧಾನಸಭೆಯ ಅವಧಿ ಮೇ 23ಕ್ಕೆ ಕೊನೆಯಾಗಲಿದೆ. ಪ್ರಸ್ತುತ ಬಿಜೆಪಿ 119, ಕಾಂಗ್ರೆಸ್ 75, ಜೆಡಿಎಸ್‌ 28 ಶಾಸಕ ಬಲ ಹೊಂದಿವೆ. ಬಿಜೆಪಿಯ ಉಮೇಶ್ ಕತ್ತಿ ಹಾಗೂ ಆನಂದ್ ಮಾಮನಿ ನಿಧನರಾದ ಹಿನ್ನೆಲೆಯಲ್ಲಿ 2 ಸ್ಥಾನಗಳು ಖಾಲಿಯಿವೆ. ಈ ಸ್ಥಾನಗಳಿಗೆ ಉಪ ಚುನಾವಣೆ ನಡೆದಿರಲಿಲ್ಲ.

Leave a Comment

Your email address will not be published. Required fields are marked *