Ad Widget .

ಪುತ್ತೂರು ಕಾಂಗ್ರೆಸ್ ಗೆ ಬಿಗ್ ಶಾಕ್| ಜೆಡಿಎಸ್ ನತ್ತ ಹಾರಿದ ದಿವ್ಯಪ್ರಭಾ ಚಿಲ್ತಡ್ಕ!

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget . Ad Widget .

ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ಕಾಂಗ್ರೆಸ್ ಮುಖಂಡ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಎಂಎಲ್‌ಎ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್‌ ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಕೆಲವು ಮಾಹಿತಿ ಪ್ರಕಾರ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆಯೂ ಇದೆ ಎಂದು ಮಾತುಗಳು ಕೇಳಿಬರುತ್ತಿವೆ.

ಒಟ್ಟಾರೆ ಕಾಂಗ್ರೆಸ್ ನ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಪ್ರಭಾ ಪುತ್ತೂರು ಕ್ಷೇತ್ರದಲ್ಲಿ ಸಂಚರಿಸಿ ವಿವಿಧ ಕಾರ್ಯಕ್ರಮಗಳನ್ನು ನಡೆಸಿದ್ದರು. ಆದರೆ ಇತ್ತೀಚಿನ ಬೆಳವಣಿಗೆಗಳಿಂದ ಪಕ್ಷದಲ್ಲಿ ಉಂಟಾದ ಗೊಂದಲಗಳ ಕಾರಣದಿಂದ ದಿವ್ಯಪ್ರಭಾ ಕಾಂಗ್ರೆಸ್ ನಲ್ಲಿ ಮೂಲೆಗುಂಪಾಗಿದ್ದರು.

Leave a Comment

Your email address will not be published. Required fields are marked *