ಸಮಗ್ರ ನ್ಯೂಸ್: ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರಿದ್ದ ವಾಹನ ತಡರಾತ್ರಿ ಅಪಘಾತಕ್ಕೀಡಾಗಿದೆ.
ಯಾದಗಿರಿಯಿಂದ ಬರುವಾಗ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ.
ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ವಾಹನವೂ ಉರುಳಿದೆ. ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್ ಅವರನ್ನು ದಾಖಲಿಸಲಾಗಿದೆ.
ಬಾಬುರಾವ್ ಚಿಂಚನಸೂರ್ ಅವರು ಇಂದು ನಾಮಪತ್ರ ಸಲ್ಲಿಸಬೇಕಿತ್ತು. ಅದಕ್ಕಾಗಿ ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದರು. ಸರಳವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ರಸ್ತೆ ಅಪಘಾತದಲ್ಲಿ ಗಾಯವಾದ ಹಿನ್ನಲೆ ನಾಮಪತ್ರ ಸಲ್ಲಿಕೆ ಸದ್ಯಕ್ಕೆ ಮೂಂದೂಡಿಕೆ ಮಾಡಲಾಗಿದೆ