ಸಮಗ್ರ ನ್ಯೂಸ್: ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಎ.೧೭ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಏಪ್ರಿಲ್ ೧೫ ರಂದು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಏ. ೧೭ರಂದು ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.