Breaking:ಸೇತುವೆಯಿಂದ ಉರುಳಿದ‌ ಟ್ರಾಕ್ಟರ್; 20 ಮಂದಿ ಸಾವು

ಸಮಗ್ರ ನ್ಯೂಸ್: ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

Ad Widget ... ..

ಸೇತುವೆಯ ಬೇಲಿ ಮುರಿದು ಟ್ರ್ಯಾಕ್ಟರ್ ಟ್ರಾಲಿ ನದಿಗೆ ಬಿದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಭಕ್ತರು ಗರ್ರಾ ನದಿಯಲ್ಲಿ ನೀರು ತುಂಬಿಸಲು ಬಂದಿದ್ದರು ಎಂದು ತಿಳಿದು ಬಂದಿದೆ.

Ad Widget

ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡವು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಅಪಘಾತ ತೆರಳಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯರು ಸಹ ಈ ರಕ್ಷಣಾ ಕಾರ್ಯದಲ್ಲಿ ಜೀವ ಉಳಿಸಲು ಸಹಾಯ ಮಾಡುತ್ತಿದ್ದಾರೆ.

ಟ್ರ್ಯಾಕ್ಟರ್-ಟ್ರಾಲಿಯಲ್ಲಿ 40 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಇದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನೆಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ಧಾರೆ.

Leave a Comment

Your email address will not be published. Required fields are marked *