ಹವಾಮಾನ ವರದಿ| ಕರಾವಳಿಯಲ್ಲಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಎ.15 ರಿಂದ 18ರ ವರೆಗೆ ಮಳೆಯ ನಿರೀಕ್ಷೆ ಇದೆ. ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೊಷಿಸಲಾಗಿದೆ.

Ad Widget ... ..

ಶುಕ್ರವಾರ ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

Ad Widget

ಕರಾವಳಿ ಕರ್ನಾಟಕದ ಭಾಗಗಳಾದ, ಹೊನ್ನಾವರ 34.1, ಕಾರವಾರ 35.7, ಶಿರಾಲಿ 35.9 ಮಂಗಳೂರು ವಿಮಾನ ನಿಲ್ದಾಣದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡಿ ಭಾಗದಲ್ಲಿ ನೋಡುವುದಾದರೆ, ಬೆಳಗಾವಿ ನಗರ 36, ಬೆಳಗಾವಿ ವಿಮಾನ ನಿಲ್ದಾಣ 37.4, ಬೀದರ್ 37.4, ವಿಜಯಪುರ 39, ಬಾಗಲಕೋಟೆ 36.6 ಧಾರವಾಡ 38.4, ಗದಗ 38.9, ಹಾವೇರಿ 37.8, ಕೊಪ್ಪಳ 38.7 ತಾಪಮಾನ ದಾಖಲಾಗಿದೆ.

ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಗದಗ, ಹಾವೇರಿ, ಕಲಬುರ್ಗಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ ಯಾವುದೇ ರೀತಿಯ ಮಳೆಯ ಮುನ್ಸೂಚನೆಗಳು ಇಲ್ಲ.

Leave a Comment

Your email address will not be published. Required fields are marked *