Ad Widget .

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಅಶ್ರಫ್‌ ಅಹ್ಮದ್‌ ಗೆ ಶೂಟ್‌ ಔಟ್| ಬೀದಿ‌ ಹೆಣವಾದ ಮಾಜಿ ಸಂಸದ

ಸಮಗ್ರ ನ್ಯೂಸ್: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್ ಮತ್ತು ಸಹೋದರ ಅಶ್ರಫ್‌ ಅಹ್ಮದ್‌ ಗ್ಯಾಂಗ್‌ವಾರ್‌ಗೆ ಬಲಿಯಾಗಿದ್ದಾರೆ.

Ad Widget . Ad Widget .

2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.

Ad Widget . Ad Widget .

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದು ಜೈಲಿನಲ್ಲಿದ್ದರು.

ಮಾ.15ರಂದು ಪ್ರಯಾಗ್‌ರಾಜ್‌ ಆಸ್ಪತ್ರೆಗೆ ಮೆಡಿಕಲ್‌ ಚೆಕಪ್‌ಗೆಂದು ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಲು ಮುಂದಾಗಿದ್ದಾರೆ ಶ.ಈ ವೇಳೆ ಎಲ್ಲಿಂದಲೋ ಬಂದ ಇಬ್ಬರು ಅನಾಮಿಕ ವ್ಯಕ್ತಿಗಳು ಪಿಸ್ತೂಲ್‌ನಿಂದ ಶೂಟ್‌ ಮಾಡಿ ಹತ್ಯೆ ಮಾಡಿದ್ದಾರೆ.

Leave a Comment

Your email address will not be published. Required fields are marked *