Ad Widget .

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ

Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.

Ad Widget . Ad Widget .

ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಗಿತ್ತು. ದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡುವುದಾಗಿ ನಡ್ಡಾ, ಅಮಿತ್ ಶಾ ಹೇಳಿದರು. ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ದೆ. ಅಷ್ಟೇ ಅಲ್ಲದೇ ಅವರು ಹೇಳಿರುವವರಿಗೆ ಟಿಕೆಟ್ ಕೊಡುತ್ತೇವೆ ಎಂದಿತ್ತು. ಆದರೂ ಶೆಟ್ಟರ್ ರಾಜೀನಾಮೆ ನೀಡಿರುವುದು ನನಗೆ ವೈಯಕ್ತಿಕವಾಗಿ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಅತಿಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ. ಲಿಂಗಾಯತ ಸಮುದಾಯಕ್ಕೆ ಅತಿಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳೆದು ನಿಂತಿದೆ. ಎರಡನೇ ಪೀಳೀಗೆಯಲ್ಲಿ ಲಿಂಗಾಯತ ಸಮುದಾಯದ ಸಿಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಎಲ್ಲರಿಗೂ ಅವಕಾಶ ಕೊಡಲಾಗಿದೆ ಎಂದರು.

ಜಗದೀಶ್ ಶೆಟ್ಟರ್ ಮುಂದುವರಿಸಿಕೊಂಡು ಹೋದ್ರೆ ಚೆನ್ನಾಗಿ ಇರುತ್ತಿತ್ತು. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಇದು ಹೈಕಮಾಂಡ್ ತೀರ್ಮಾನವಾಗಿದೆ. ಬದಲಾವಣೆ ತರುವ ಅಂತಹ ಕಾಲ ಇದು. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ ಎಂದು ಹೇಳಿದರು. ಇದನ್ನೂ ಓದಿ: ಬಹಿರಂಗ ಆಹ್ವಾನ ನೀಡಿ ಶೆಟ್ಟರ್‌ಗೆ ಗಾಳ ಹಾಕಿದ ಕಾಂಗ್ರೆಸ್‌

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ. ಆದರೆ ಅದಕ್ಕೆ ತಂತ್ರ ಪ್ರತಿತಂತ್ರ ರೂಪಿಸುತ್ತೇವೆ. ಆದರೆ ನಮ್ಮ ಚುನಾವಣೆ ತಂತ್ರ ರೂಪಿಸುತ್ತವೆ. ಪಕ್ಷ ಗೆಲ್ಲುತ್ತದೆ. ನಿನ್ನೆ ಸ್ವತಃ ಶೆಟ್ಟರ್ ಜೊತೆ ಅಮಿತ್ ಶಾ ಮಾತಾಡಿದ್ದಾರೆ. ಜಗದೀಶ್ ಶೆಟ್ಟರ್ ಎಲ್ಲದಕ್ಕೆ ನಾನು ಉತ್ತರ ಕೊಡಲ್ಲ. ಹೊಸ ಬೆಳವಣಿಗಾಗಿ ಈ ಪ್ರಯತ್ನ ಎಂದು ಹೇಳಿದರು.

Leave a Comment

Your email address will not be published. Required fields are marked *