Ad Widget .

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Samagra news: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ನೇತ್ರಾವತಿ ನದಿಯಲ್ಲಿ ಎ.16 ರಂದು ಆದಿತ್ಯವಾರ ಬೆಳಿಗ್ಗೆ ಪತ್ತೆಯಾಗಿದೆ.

Ad Widget . Ad Widget .

ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಮೃತ ವ್ಯಕ್ತಿ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget . Ad Widget .

ಅವರು ಎ.14 ರಂದು ರಾತ್ರಿ ವೇಳೆ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಮನೆಯಿಂದ ಹೊರಗೆ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದರು.

ಎ. 14 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಎಲ್ಲರ ಜೊತೆ ಕುಳಿತುಕೊಂಡಿದ್ದವರು ಮನೆಯಲ್ಲಿದ್ದ ಉಡುಗೆಯಲ್ಲಿ ಮನೆಯಿಂದ ಹೊರಗೆ ಹೋದವರು ಮನೆಗೆ ಬರಲಿಲ್ಲ ಎಂದು ಅವರು ತಿಳಿಸಿದ್ದರು.

ಇವರ ಗುರುತು ಪತ್ತೆಯಾದಲ್ಲಿ ನಗರ ಪೋಲೀಸ್ ಠಾಣೆಯ ನ್ನು ಸಂಪರ್ಕ ಮಾಡುವಂತೆ ಕೋರಿದ್ದರು. ಇಂದು ಬೆಳಿಗ್ಗೆ ಸಜೀಪ ಮುನ್ಮೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಮನೆಯ ಬದಿಯಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಇವರ ಶವ ತೇಲಾಡುತ್ತಿದ್ದನ್ನು ನೋಡಿ ಮನೆಯವರಿಗೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *