Ad Widget .

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ

ಸಮಗ್ರ ನ್ಯೂಸ್:‘ಜಗದೀಶ್ ಶೆಟ್ಟರ್ ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Ad Widget . Ad Widget .

ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನತೆ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

Ad Widget . Ad Widget .

‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಇದಕ್ಕೆ ಶೆಟ್ಟರ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಅವರು ಬಿಜೆಪಿಗೆ ಮರಳಿ ಬಂದರೆ ಸ್ವಾಗತಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು.

http://pic.twitter.com/x9Dw9LNY0v

ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Leave a Comment

Your email address will not be published. Required fields are marked *