ಬಿಸಿಲಿಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ರಾಜ್ಯದ ಹಲವುವೇಳೆ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಏಪ್ರಿಲ್ 20 ರವರೆಗೆ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವಡೆ ನಾಳೆ ಮತ್ತು ನಾಡಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.