ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ‘ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ʼ ನೀಡಿದ್ದು, ಮದ್ಯ ಪ್ರಿಯರು ಸಂತಸ ನೀಡಿದೆ.
ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ಮದ್ಯವನ್ನು ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗವು ಈ ಹಿಂದೆಯೆ ಆದೇಶ ಹೊರಡಿಸಿತ್ತು ಈ ಬೆನ್ನಲ್ಲೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ಮದುವೆ ಸಮಾರಂಭ ಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ದೂರು ಸಲ್ಲಿಸಲಾಗಿತ್ತು.
ಈ ನಿಟ್ಟಿನಲ್ಲಿಇನ್ಮುಂದೆ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆಯ ನಿರ್ಬಂಧವನ್ನು ಸಡಿಲಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೇ ರಾಜಕೀಯ ಪಕ್ಷಗಳಿಂದ ಅಥವಾ ರಾಜಕಾರಣಿಗಳಿಂದ ನಡೆಯುವ ಸಭೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಬಾರದುಚುನಾವಣಾ ಅಯೋಗವು ಆದೇಶ ಹೊರಡಿಸಿದೆ ಹೀಗಾಗಿ ಅದ್ದೂರಿಯಾಗಿ ಮದುವೆ ಸಮಾರಂಭಗಳ ನಡೆಸುವ ಜನರಿಗೆ ಚುನಾವಣಾ ಆಯೋಗದ ನೂತನ ಆದೇಶವೂ ಸಂತಸ ನೀಡಿದಂತಾಗಿದೆ.