ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ.
LokPoll ಮಾರ್ಚ್ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷ ಬಿಜೆಪಿ 66-69 ಸ್ಥಾನಗಳಲ್ಲಿ ಜಯಗಳಿಸಲಿದೆ. LokPoll ಫೆಬ್ರವರಿ ತಿಂಗಳಿನಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಬಿಜೆಪಿ 77-83 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವರದಿ ಬಂದಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಪಕ್ಷ ಮಾರ್ಚ್ ತಿಂಗಳ ಸಮೀಕ್ಷೆಯಲ್ಲಿ ಸ್ಥಾನಗಳನ್ನು ಕಳೆದುಕೊಂಡಿದೆ.
ಜೆಡಿಎಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 21-25 ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಫೆಬ್ರವರಿಯ ಸಮೀಕ್ಷೆಯಲ್ಲಿ ಜೆಡಿಎಸ್ 21-27 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ವರದಿ ಬಂದಿತ್ತು. ಪಕ್ಷ ಶೇ 15-18ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಪಡೆಯಲಿದೆ.