Samagra news: ವಿಧಾನಸಭೆ ಚುನಾವಣೆ ಹಿನ್ನಲೆ ಸುಳ್ಯ ತಾಲೂಕಿನ ಬಿಜೆಪಿ,ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಮಾ.18ರಂದು ತಮ್ಮ ನಾಮಪತ್ರವನ್ನು ಚುನಾವಣೆ ಅಧಿಕಾರಿಗೆ ಸಲ್ಲಿಸಿದರು.
ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಸುಳ್ಯದ ಶ್ರೀ ರಾಮ ಪೇಟೆಯಿಂದ ಮೆರವಣಿಗೆ ಆರಂಭಗೊಂಡು, ಈ ವೇಳೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.
ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ , ಶೀಪತಿ ಭಟ್ ಮಜಿಗುಂಡಿ ಜೊತೆ ಆಗಮಿಸಿದ ಭಾಗೀರಥಿ ಮುರುಳ್ಯ, ಚುನಾವಣಾಧಿಕಾರಿ ಅರುಣ್ ಕುಮಾರ್ ರಿಗೆ ನಾಮ ಪತ್ರ ಸಲ್ಲಿಸಿದರು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರಿಗೆ ಸುಳ್ಯ ಕಾಂಗ್ರೇಸ್ ಚುನಾವಣಾ ಕಚೇರಿಯಿಂದ ಸುಳ್ಯ ಮತ್ತು ಕಡಬ ಬ್ಲಾಕ್ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು.
ಇದೇ ಸಂದರ್ಭ ಪುರಭವನದ ಬಳಿ ಸಭಾಕಾರ್ಯಕ್ರಮ ನಡೆಯಿತು ಕೆಪಿಸಿಸಿ ವಕ್ತಾರೆ ಭವ್ಯನರಸಿಂಹ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ಕಾಂಗ್ರೇಸ್ ದ. ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ,ಎನ್ ಜಯಪ್ರಕಾಶ್ ರೈ, ಟಿ ಎಂ ಶಹೀದ್ ಇವರ ಜೊತೆಗಿದ್ದರು.
ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ಬಂದು ಚುನವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ಸುಳ್ಯ ತಹಶೀಲ್ದಾರ್ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ , ಮತ್ತು ರಮೇಶ್ ಬಾಬು ಸಹಾಯಕ ಚುನಾವಣಾಧಿಕಾರಿ ಅಭ್ಯರ್ಥಿಗಳಿಗೆ ನಿಯಮವನ್ನು ತಿಳಿಸಿದರು.