Samagra news: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದ ಕೋಟೂರು ಗ್ರಾಮದಲ್ಲಿ ನಡೆದಿದೆ.
ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದ ವ್ಯಕ್ತಿ. ಇವರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದು ಮಾ.19ರ ತಡರಾತ್ರಿ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇನ್ನು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗರಗ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.