ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಿಜೆಪಿಯಿಂದ ಬಾಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ.
ಇನ್ನೂ ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.