ಸಮಗ್ರ ನ್ಯೂಸ್: ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಡದ ಕಾರಣ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಲ್ಲಿ ನಡೆದಿದೆ.
ಗ್ರಾಮದ ಮಹಾಮ್ಮಾಯಿ ದೇವಸ್ಥಾನ ಹಾಗೂ ಅಲ್ಲಿನ ಪ.ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವ 20 ಕುಟುಂಬದವರ ಮನೆಯ ಅಡಿಸ್ಥಳ ಇದುವರೆಗೂ ಪಹಣಿಯಾಗಿರುವುದಿಲ್ಲ. ಅರ್ಜಿ ಸಲ್ಲಿಸಿದರೂ ವಿಳಂಬ ನೀತಿ ಅನುಸರಿಸುತ್ತಿರುವ ಆಡಳಿತ ಮತ್ತು ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತದಾನ ಬಹಿಷ್ಕರಿಸಿ ಹೋರಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.