Ad Widget .

ಜಮ್ಮು: ಸೇನಾವಾಹನಕ್ಕೆ ಬೆಂಕಿ| ಹಲವು ಯೋಧರು ಹುತಾತ್ಮರಾಗಿರುವ ಶಂಕೆ

ಸಮಗ್ರ ನ್ಯೂಸ್: ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಘೋರ ದುರಂತ ಸಂಭವಿಸಿದೆ. ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹಲವು ಯೋಧರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Ad Widget . Ad Widget .

ಮೂರು-ನಾಲ್ಕು ಸೈನಿಕರು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಸೇನಾ ಮೂಲಗಳು ಎಬಿಪಿಗೆ ತಿಳಿಸಿವೆ. ಸ್ಥಳಕ್ಕೆ ಸೇನಾ ಪಡೆ ಧಾವಿಸಿದ್ದು ಬೆಂಕಿ ನಂದಿಸಿದೆ. ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ನಡೆಸಲಾಗುತ್ತಿದೆ.

Ad Widget . Ad Widget .

ಪ್ರಾಥಮಿಕ ಮಾಹಿತಿ ಪ್ರಕಾರ, ಸಿಡಿಲಿನ ಹೊಡೆತಕ್ಕೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸೇನಾ ವಾಹನ ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಹನ ಸಂಪೂರ್ಣ ಹೊತ್ತಿ ಉರಿಯುತ್ತಿರುವ ದೃಶ್ಯ ಹಾಗೂ ಜನರು ಆಗಮಿಸುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

Leave a Comment

Your email address will not be published. Required fields are marked *