Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮತ್ತು ಶುಕ್ರವಾರ (ಎ.19, 20) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

. Ad Widget . Ad Widget

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ.

. Ad Widget . . Ad Widget . Ad Widget

ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *