Ad Widget .

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು

ಸಮಗ್ರ ನ್ಯೂಸ್: ಪುತ್ತೂರಿನ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ.

Ad Widget . Ad Widget .

ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಿದ್ದರು.

Ad Widget . Ad Widget .

ನ್ಯಾ.ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್‌ ಪೀಠ ಶ್ರೀಗಳ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.
ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರದ ಆರೋಪದಲ್ಲಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪ್ರಮುಖ ಸಾಕ್ಷಿಯಾಗಿದ್ದರು.

ಶ್ಯಾಮ್ ​ಪ್ರಸಾದ್ ಶಾಸ್ತ್ರಿ ಸಂತ್ರಸ್ತೆ ಮಹಿಳೆಯ ಮೈದುನ. 2014, ಆಗಸ್ಟ್ 31ರಂದು ಅವರು ತಮ್ಮ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಶಾಸ್ತ್ರಿ ಪತ್ನಿ ಸಂಧ್ಯಾಲಕ್ಷ್ಮೀ ಅವರು ಮೂವರ ವಿರುದ್ಧ ದೂರು ದಾಖಲಿಸಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನದಂದು ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಬೋಳಂತಾಯ ಶಿವಶಂಕರ್ ಭಟ್ ಅವರು ತಮ್ಮ ಪತಿಗೆ ಕರೆ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದರು. ರಾಘವೇಶ್ವರ ಶ್ರೀಗಳ ಪರವಾಗಿ ಸಾಕ್ಷಿ ಹೇಳಬೇಕು. ರಾಮಚಂದ್ರಾಪುರ ಮಠಕ್ಕೆ ಹೋಗಿ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು. ಅಣ್ಣ-ಅತ್ತಿಗೆ ಮಾಡಿದ್ದು ತಪ್ಪು ಎಂದು ಒಪ್ಪಿ ಲಿಖಿತವಾಗಿ ಬರೆದು ಕೊಡಬೇಕು ಎಂದು ತಮ್ಮ ಪತಿಗೆ ಬೆದರಿಕೆ ಹಾಕಿದ್ದಾಗಿ ಸಂಧ್ಯಾಲಕ್ಷ್ಮೀ ಆರೋಪಿಸಿದ್ದರು.ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲಾಗಿತ್ತು.

Leave a Comment

Your email address will not be published. Required fields are marked *