Ad Widget .

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ ನಡೆಸಿದೆ. ಖರ್ಗೆ ಅವರು ಆಗಮಿಸುವ ಬಗ್ಗೆ ಕಾಂಗ್ರೆಸ್ ಮುಖಂಡರು ಖಚಿತಪಡಿಸಿದ್ದಾರೆ‌. ಏ.25ರಂದು ಖರ್ಗೆ ಅವರು ಸುಳ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Ad Widget . Ad Widget .

ಇದಲ್ಲದೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ಧರಾಮಯ್ಯ ಸೇರಿದಂತೆ ರಾಷ್ಟ ಹಾಗು ರಾಜ್ಯಮಟ್ಟದ ನಾಯಕರನ್ನು ಪ್ರಚಾರಕ್ಕೆ ಕರೆಸುವ ಪ್ರಯತ್ನಗಳು ನಡೆಯುತ್ತಿದೆ. ಒಟ್ಟಾರೆ ಹೈಕಮಾಂಡ್ ನ ಸಪೋರ್ಟ್ ಈ ಬಾರಿ ಸುಳ್ಯ ಕಾಂಗ್ರೆಸ್ ಗೆ ಹೆಚ್ಚಾಗಿದ್ದು, ಸುಳ್ಯದ ಕಾಂಗ್ರೆಸ್ ‌ಮುಖಂಡರಿಗೆ ಹೊಸ ಹುಮ್ಮಸ್ಸು ತಂದುಕೊಟ್ಟಿದೆ.

Leave a Comment

Your email address will not be published. Required fields are marked *